Karnataka rain alert : ಸತ್ಯ ರಾಜ್ಯದಲ್ಲಿ ಒಂದು ವಾರದಿಂದ ಮಳೆ ಆರ್ಭಟ ಕಡಿಮೆಯಾಗಿದ್ದು, ರೈತರ ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ. ಇದರ ಮಧ್ಯೆ ಭಾರತೀಯ ಹವಾಮಾನ ಇಲಾಖೆಯು ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿ, ಉತ್ತರ ಒಳನಾಡು ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka rain alert : ರಾಜ್ಯದಲ್ಲಿ ಮತ್ತೆ ಮಳೆ.
ನಿನ್ನೆ ಮತ್ತು ಇಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಹಾಗೆಯೇ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆಲವು ಭಾಗಗಳಲ್ಲಿ ನಿನ್ನೆಯಿಂದ ಮೋಡಕವಿದ ವಾತಾವರಣ ಆರಂಭವಾಗಿದೆ.
ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇರಲಿದೆ ಎಂದು ಹೇಳಲಾಗಿದೆ.
ಮಳೆ ಎಲ್ಲೆಲ್ಲಿ?
ಬೀದರ್ ಗುಲ್ಬರ್ಗ ಕೊಪ್ಪಳ ರಾಯಚೂರು ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಪ್ರಮಾಣದ ಗುಡುಗು ಸಹಿತ ಮಳೆ ಆಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Gruha lakshmi ಹಣ ಯಾರಿಗೆಲ್ಲ ಜಮಾ ಆಗಿಲ್ಲ? ಇಲ್ಲಿದೆ ನೋಡಿ ಮಾಹಿತಿ.
ಅಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಚಿತ್ರದುರ್ಗ ದಾವಣಗೆರೆ ಹಾಸನ ಕೋಲಾರ ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಸಹ ಲಘು ಪ್ರಮಾಣದ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಒಣ ಹವೆ ಎಲ್ಲೆಲ್ಲಿ ?
ಬಾಗಲಕೋಟೆ ಧಾರವಾಡ ಗದಗ ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇದೆ.
ಪಿಎಂ ಕಿಸಾನ್ 22 ನೇ ಕಂತಿನ ಹಣ ಜಮಾ ಆಗುವ ಕುರಿತು ಮಾಹಿತಿ.

My self Malatesh, from Haveri Karnataka. I have experienced in Kannada news content writing since, 2021 , provide valuable and honest information timely.